ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದ ಕಾಂಗ್ರೆಸ್…! ಜೆಡಿಎಸ್ ಅಖಾಡಕ್ಕೆ ಅಭ್ಯರ್ಥಿ ಫಿಕ್ಸ್..!!
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳು ಯಾರು ಸಿಗದೇ ಇದ್ದ ಕಾರಣಕ್ಕೆ ಕಾಂಗ್ರೆಸ್ ಈ ಕ್ಷೇತ್ರವನ್ನು ಕೂಡ ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಇದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ.
ಜೆಡಿಎಸ್ ಪಕ್ಷದಿಂದ ದಿವಂಗತ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರರಾದ , ಮಾಜಿ ಶಾಸಕ ಮಧು ಬಂಗಾರಪ್ಪ ಅಖಾಡಕ್ಕೆ ಇಳಿಯುವ ಸಾಧ್ಯತೆ ಇದೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪಕ್ಷದ ವತಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈ ಬಾರಿ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷ ಕಮಲವನ್ನು ಮುದುಡಿಸಲು ಎಲ್ಲಾ ರೀತಿಯ ಬಲೆಗಳನ್ನು ಸಿದ್ದಪಡಿಸಿಕೊಳ್ಳುತ್ತಿದ್ದಾರೆ.
Comments