ರೈತ ಮಹಿಳೆಗೆ ಕಿಸಾನ್ ಕಾರ್ಡ್ ನೀಡುವಂತೆ ಮುಖ್ಯಮಂತ್ರಿಗೆ ಮನವಿ... ರೈತ ಮಹಿಳೆಯರು ಸ್ವಾವಲಂಬಿಗಳಾಗಲು ಪ್ರಮೀಳ ಮಹದೇವ್ ಕರೆ
ದಿ.15/10/2018 ನೆ ಸೋಮವಾರ ಕೃಷಿ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಪ್ರಥಮ ರೈತ ಮಹಿಳಾ ದಿನಾಚಾರಣೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿಯ ಶ್ರೀ ಶನಿಮಹಾತ್ಮ ದೇವಸ್ಥಾನದ ಅನ್ನ ದಾಸೋಹ ಭವನದಲ್ಲಿ ನಡೆಯಿತು, ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆ ವಹಿಸಿದ್ದರು, ತಾ.ಪಂ.ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ ಕಾರ್ಯಕ್ರಮ ಉದ್ಘಾಟಿಸಿದರು, ರಾಷ್ಟ್ರೀಯ ರೈತ ಮಹಿಳಾ ದಿನಾಚಾರಣೆ ಪ್ರಯುಕ್ತ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳೆಯರಿಗೆ ಹರಿಶಿನ ಕುಂಕುಮ ನೀಡಿ ಸ್ವಾಗತಿಸಲಾಯಿತು.
ತಾ.ಪಂ.ಅಧ್ಯಕ್ಷ ಶ್ರೀವತ್ಸ, ಜಿಲ್ಲಾ ಪಂಚಾಯತಿ ಸದಸ್ಯ ಚುಂಚೇಗೌಡ, ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮಣಿ, ಉಪಾಧ್ಯಕ್ಷ ಸುರೇಶ್, ತಾ.ಪಂ.ಸದಸ್ಯೆ ಚನ್ನಮ್ಮ ರಾಮಲಿಂಗಯ್ಯ, ಶನಿಮಹಾತ್ಮ ದೇವಸ್ಥಾನದ ಮುಖ್ಯಸ್ಥ ರಾಜ್ ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀ ನಾರಾಯಣಸ್ವಾಮಿ, ತಾಂತ್ರಿಕ ಅಧಿಕಾರಿ ಶ್ರೀಮತಿ ರೂಪ, ಕನಸವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ, ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು, ತಾಲೂಕಿನ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕ್ರಮಕ್ಕೆ ಸಹಯೋಗ ನೀಡಿರುವ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರಮೀಳಮಹಾದೇವ್ ಹಾಗೂ ಕಸಾಪ ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ತಾಲ್ಲೂಕಿನ ಎಲ್ಲಾ ರೈತ ಮಹಿಳೆಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
Comments