ಅಂಬರೀಶ್ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ..! ? ತೆನೆ ಹೊರಲು ಸಿದ್ದರಾದ್ರ ರೆಬಲ್ ಸ್ಟಾರ್..?

ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಕೂಡ ಒಂದಲ್ಲ ಒಂದು ತಲೆನೋವನ್ನು ವಿಪಕ್ಷಗಳು ಕೊಡುತ್ತಲೆ ಬರುತ್ತಿವೆ. ಆದರೂ ಜಗ್ಗದ ದೋಸ್ತಿ ಸರ್ಕಾರವು ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಹೋಗುತ್ತಿದೆ. ಅನೇಕ ರೀತಿಯ ಸಹಾಯಗಳನ್ನು ಮಾಡುತ್ತಾ ಬಂದಿದ್ಧಾರೆ..
ಇಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಅಂಬರೀಶ್ ಅವರನ್ನು ಭೇಟಿ ಮಾಡಿದ್ದು, ಚುನಾವಣೆಯಲ್ಲಿ ತಮಗೆ ಸಹಕಾರ ನೀಡುವಂತೆ ಹಾಗೂ ಮಂಡ್ಯಕ್ಕೆ ಆಗಮಿಸಿ ತಮ್ಮ ಪರ ಪ್ರಚಾರ ಮಾಡುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರು ಅಂಬರೀಶ್ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿಕೊಂಡಿದ್ದಾರೆ. ಈ ಎಲ್ಲಾ ಲಕ್ಷಣಗಳನ್ನು ನೋಡುತ್ತಿದ್ದರೆ ಅಂಬರೀಶ್ ತೆನೆ ಹೊರಲು ಸಿದ್ದರಾಗ್ತಿದ್ದಾರಾ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡದೆ ಇರದು.
Comments