ಬಿಜೆಪಿ ಹಣಿಯಲು ಗುರು ಶಿಷ್ಯರ ರಣತಂತ್ರವೇನು?
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯನು ಎದುರಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿದ್ದು, 12 ವರ್ಷಗಳ ನಂತರ ಒಂದೇವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ಕೆಲವರ ಕಣ್ಣನು ಹುಬ್ಬೇರಿಸುವಂತೆ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗುರು ಶಿಷ್ಯ ರಾದ ಎಚ್ ಡಿ ದೇವೇಗೌಡ ಮತ್ತು ಸಿದ್ದರಾಮಯ್ಯನವರು ಮಾತನಾಡಿ, ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲ್ಲು ಜಾತ್ಯತೀತ ಪಕ್ಷಗಳು ಒಂದುಗೂಡಿ ಕೆಲಸಮಾಡಬೇಕಿದೆ. ಉಪಚುನಾವಣೆಯ 5 ಕ್ಷೇತ್ರಗಳಲ್ಲಿ 3 ಕ್ಷೇತ್ರಗಲ್ಲಿ ಜೆಡಿಎಸ್ ಗೆ ಬೆಂಬಲಸೂಚಿಸಿದ್ದು ಮತ್ತೆರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದು ಎಲ್ಲ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಹೇಳಿದರು. ಮತ್ತೆ 5 ಕ್ಷೇತ್ರಗಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆಲ್ಲವು ಸಾಧಿಸಲು ಮಾಸ್ಟರ್ ಪ್ಲಾನ್ ರೂಪಿಸಿರುವ ಬಗ್ಗೆ ಕಂಡುಬರುತ್ತಿದೆ.
Comments