ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ ದೇವೆಗೌಡರ ನಡೆ..!?
ರಾಜ್ಯ ರಾಜಕಾರಣದಲ್ಲಿ ಯಾವಾಗಲೂ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಬಾರಿಸಂಚಲನ ಮೂಡಿಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು ನಾವೆಲ್ಲಾ ಹಳೆಯದನ್ನೆಲ್ಲಾ ಮರೆತು ಮತ್ತೆ ಒಂದಾಗಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ. ನಮಗೆ ರಾಜ್ಯದ ಅಭಿವೃದ್ಧಿ ಮುಖ್ಯ, ಹಳೆಯದನ್ನು ಮರೆತು ಬಿಡಿ ಎಂದ ದೇವೇಗೌಡರು ನಮ್ಮದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಎಂದು ಅಚ್ಚರಿ ಮೂಡಿಸಿದರು. ಇದೀಗ ಯಾರಲ್ಲೂ ವೈಮನಸ್ಸು ಇಲ್ಲದೆ ಮೈತ್ರಿ ಸರ್ಕಾರ ಭದ್ರವಾಗಿರುತ್ತೆ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡೆಸಿದ್ಧಾರೆ.
Comments