ರಾಜ್ಯದ ಜನತೆಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಕುಮಾರಸ್ವಾಮಿ
ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಲೋಡ್ ಶೆಡ್ಡಿಂಗ್ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೆಮ್ಮದಿಯ ಸುದ್ದಿ ಕೊಟ್ಟಿದ್ದಾರೆ.. ಕಲ್ಲಿದ್ದಲು ಕೊರತೆಯ ಕಾರಣಕ್ಕೆ ಉಷ್ಣ ಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತಗೊಂಡ ಕಾರಣ ಅಧಿಕಾರಿಗಳು ಸೋಮವಾರ ಸಂಜೆಯಿಂದಲೇ ಅಘೋಷಿತ ಲೋಡ್ ಶೆಡ್ಡಿಂಗ್ ಆರಂಭಿಸಿದ್ದರು.
ಆದರೆ ಇದೀಗ ಇದಕ್ಕೆ ಮುಖ್ಯಮಂತ್ರಿಗಳು ಬ್ರೇಕ್ ಹಾಕಿದ್ದಾರೆ. ತೀವ್ರ ಕಲ್ಲಿದ್ದಲು ಕೊರತೆ ಉಂಟಾಗಿದ್ದರು ಕೂಡ ಇದನ್ನು ತಮ್ಮ ಗಮನಕ್ಕೆ ತಾರದ ಅಧಿಕಾರಿಗಳ ವರ್ತನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿಟ್ಟಾಗಿದ್ದಾರೆ, ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಚೆಸ್ಕಾಂ ಸೇರಿದಂತೆ ವಿವಿಧ ವಿಭಾಗಿಯ ವಿದ್ಯುತ್ ನಿಯಂತ್ರಣ ಅಧಿಕಾರಿಗಳಿಗೆ ಲೋಡ್ ಶೆಡ್ಡಿಂಗ್ ಮಾಡದಂತೆ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ.
Comments