ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಅವರ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಮಾಜಿ ಸಿಎಂ ಸಿದ್ದು..!

ವಿರೋಧ ಪಕ್ಷವನ್ನು ಅಧಿಕಾರದಿಂದ ದೂರವಿಡಲು 2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಕೂಡ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು ಅವರು, ಉಪಚುನಾವಣೆ ನಡೆಯುತ್ತಿರುವ ಐದು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಇಲ್ಲಿ ಎಲ್.ಆರ್. ಶಿವರಾಮೇಗೌಡ ಭಾರಿ ಅಂತರದಿಂದ ಗೆಲ್ಲುತ್ತಾರೆ ಎಂದು ತಿಳಿಸಿದರು. ಬಹಳ ವರ್ಷಗಳಿಂದ ಎದುರಾಳಿಯಾಗಿ ಹೊರಾಟ ಮಾಡಿಕೊಂಡು ಬಂದವರು ಏಕಾಏಕಿ ಜೊತೆಯಲ್ಲಿ ಕೆಲಸ ಮಾಡಲು ಇರಿಸು-ಮುರಿಸು ಉಂಟಾಗುತ್ತೆ. ಬಿಜೆಪಿ ವಿರುದ್ಧ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ, ನಮ್ಮ ಬೆಂಬಲಿತ ಅಭ್ಯರ್ಥಿ ಗೆಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.
Comments