ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿಲ್ಲ ಎನ್ನುತ್ತಿದ್ದವರ ಬಾಯಿ ಮುಚ್ಚಿಸಿದ ಹೆಚ್’ಡಿಕೆ: ಸಿಎಂ ಮಾಡಿದ್ದೇನು ಗೊತ್ತಾ..?
ಕಾಂಗ್ರೆಸ್ ಅಭ್ಯರ್ಥಿಗಳು ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುವ ಕಡೆ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸುತ್ತಿಲ್ಲ. ಇದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಎಂದು ಸಾಕಷ್ಟು ಜನ ಮಾತನಾಡಿಕೊಳ್ಳುತ್ತಿದ್ದರು.
ಕೆಲವು ಕಡೆ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ಒಮ್ಮತದ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯನವರೇ ಜೆಡಿಎಸ್ ಅಭ್ಯರ್ಥಿ ಪರ ಮತ ಯಾಚನೆಯನ್ನು ನಡೆಸಿದ್ದಾರೆ. ಹಾಗಿದ್ದರೂ ಸಿಎಂ ಕುಮಾರಸ್ವಾಮಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿಲ್ಲ. ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ, ಮಂಡ್ಯದಲ್ಲಿ ಶಿವರಾಮೇಗೌಡರ ಪರವಾಗಿ ಮಾತ್ರ ಪ್ರಚಾರ ನಡೆಸುವ ಕಾರ್ಯಕ್ರಮವಿಟ್ಟುಕೊಂಡಿದ್ದಾರೆ ಎನ್ನುತ್ತಿದ್ದವರ ಬಾಯಿ ಮುಚ್ಚಿಸಿದ್ದಾರೆ.
Comments