ರಾಜೀನಾಮೆ ಕೊಟ್ರು ಜೆಡಿಎಸ್ ಪರ ಪ್ರಚಾರ ಮಾಡ್ತಿದ್ದಾರೆ ಈ ಪ್ರಭಾವಿ ನಾಯಕ..!

ನನ್ನ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ, ಹಾಗೂ ನನ್ನ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ನೀಡಲು ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಮಾಜಿ ಸಚಿವ ಎನ್ ಮಹೇಶ್ ತಿಳಿಸಿದ್ದರು.
ಮಂಡ್ಯದಲ್ಲಿ ಮಾಜಿ ಸಚಿವರಾದ ಎನ್. ಮಹೇಶ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜೀನಾಮೆ ಕೊಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡ್ತೀನಿ ಎಂದು ಹೇಳಿದ್ದೆ ಹಾಗಾಗಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡ್ತೀದ್ದೇನೆ. ಎಲ್. ಆರ್. ಶಿವರಾಮೇಗೌಡರಿಗೆ ಮತ ನೀಡಿ ಅವ್ರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡ್ತೀನಿ ಎಂದು ತಿಳಿಸಿದ್ದರು.
Comments