ರೈತರಿಗೆ ಗುಡ್ ನ್ಯೂಸ್ : ರೈತರ 10 ಲಕ್ಷ ಕುಟುಂಬಗಳಿಗೆ ಶುಭಸುದ್ದಿ ನೀಡಿದ ಸಿಎಂ ಕುಮಾರಸ್ವಾಮಿ
ರಾಜ್ಯದ ಮುಖ್ಯಮಂತ್ರಿಯಾದ ಹೆಚ್ ಡಿ ಕುಮಾರಸ್ವಾಮಿ ಅವರು ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನ ನೀಡಿದ್ದಾರೆ. ಮುಂದಿನ ತಿಂಗಳಲ್ಲಿ ರಾಜ್ಯದ10 ಲಕ್ಷ ರೈತ ಕುಟುಂಬಗಳಿಗೆ ಸಾಲ ಋಣಮುಕ್ತ ಪತ್ರ ನೀಡುವುದಾಗಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಕಾರ್ಯಗತ ಕುರಿತು ಸಭೆ ನಡೆಸಿದ ನಂತರ ಕುಮಾರಸ್ವಾಮಿ ಅವರು ಮಾತನಾಡಿ ರೈತರ ಸಾಲ ಮನ್ನಾಗೆ ಹಣದ ಯಾವುದೇ ಕೊರತೆ ಇಲ್ಲ.
ರೈತರ ಸಾಲಮನ್ನಾ ಕುರಿತು ನಾನು ತೆಗೆದುಕೊಂಡ ನಿರ್ಧಾರನ್ನು ಅರಗಿಸಿಕೊಳ್ಳಲು ಬಿಜೆಪಿಯವರಿಗೆ ಕಷ್ಟ ಆಗುತ್ತಿದೆ ಎಂದು ತಿಳಿಸಿದ್ದಾರೆ. ಮುಂದಿನ ತಿಂಗಳಲ್ಲಿ ರಾಜ್ಯದ 10 ಲಕ್ಷ ರೈತ ಕುಟುಂಬಗಳಿಗೆ ಸಾಲ ಋಣಮುಕ್ತ ಪತ್ರ ವಿತರಿಸಲಿದ್ದೇನೆ. ರಾಜ್ಯದ ಯಾವುದೇ ರೈತರು ಆತ್ಮಹತ್ಯೆಗೆ ಶರಣಾಗಬಾರದು. ರೈತರ ಆತ್ಮಹತ್ಯೆ ತಡೆಯಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆಯನ್ನು ಕುಮಾರಸ್ವಾಮಿಯವರು ನೀಡಿದ್ದಾರೆ.
Comments