ಬಿಗ್ ಬ್ರೇಕಿಂಗ್: ಮಧು ಬಂಗಾರಪ್ಪ ಸೋಲಿನ ಹಿಂದಿನ ರಹಸ್ಯ ಬಿಚ್ಚಿಟ್ಟ CM HDK

ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಸಮರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳು ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದೆಡೆ ಭರ್ಜರಿ ಗೆಲುವನ್ನು ಸಾಧಿಸಿದೆ.. ಫಲಿತಾಂಶ ಹೊರಬಂದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೊದಲಿಗೆ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗಾಗಿ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ವಿರುದ್ಧ ಮಧು ಬಂಗಾರಪ್ಪ ಸೋತಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೂಚನೆಯ ಮೇರೆಗೆ ನಾವು ಮಧು ಬಂಗಾರಪ್ಪರನ್ನು ಅಖಾಡಕ್ಕೆ ಇಳಿಸಿದ್ದೆವು.. ಇದಕ್ಕಾಗಿ ವಿದೇಶ ಪ್ರವಾಸದಲ್ಲಿದ್ದ ಮಧು ಬಂಗಾರಪ್ಪರವನ್ನು ಕರೆಸಿಕೊಳ್ಳಬೇಕಾಯಿತು ಎಂದು ತಿಳಿಸಿದ್ದಾರೆ. ಅಷ್ಟೆ ಅಲ್ಲದೆ ಈ ಚುನಾವಣೆಗೆ ನಾವು ಯಾವುದೇ ಪೂರ್ವ ತಯಾರಿಗಳನ್ನು ಮಾಡಿಕೊಳ್ಳದ ಕಾರಣ ಹಾಗೂ ಬಿಜೆಪಿಯವರು ಯಡಿಯೂರಪ್ಪನವರು ರಾಜೀನಾಮೆ ನೀಡಿದ ದಿನದಿಂದಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ನಮ್ಮ ಸೋಲಿಗೆ ಕಾರಣವಾಯಿತು ಎಂದು ಸಿಎಂ ಕುಮಾರಸ್ವಾಮಿಯವರು ತಿಳಿಸಿದ್ದಾರೆ.
Comments