ಉಪ ಚುನಾವಣೆಯ ಫಲಿತಾಂಶದ ಬೆನ್ನಲೆ ‘ಆಪರೇಷನ್ ಕಮಲ’ದ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ CM HDK

ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇದರ ಹಿನ್ನಲೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಪಂಚ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿ ಕೂಟದ ಶಾಸಕರಿಗೆ ಮತ್ತೆ ಬಿಜೆಪಿ ಪಕ್ಷದವರು ಆಮಿಷ ಒಡ್ಡುತ್ತಿದ್ದಾರೆ.. ಸೋಮವಾರ ರಾತ್ರಿ 11 ಗಂಟೆಗೆ ಬಿಜೆಪಿ ನಾಯಕರು ನಮ್ಮ ನಾಯಕರಿಗೆ ಕರೆ ಮಾಡಿ ಆಮಿಷ ಒಡ್ಡಿದ್ದಾರೆ. ಸುಮಾರು 1 ಕೋಟಿ ರೂ. ಗೆ ಬಿಜೆಪಿ ನಾಯಕರು ಆಮಿಷ ಒಡ್ಡಿದ್ದರು ಎಂದು ತಿಳಿಸಿದ್ದಾರೆ.
Comments