ಮಧು ಬಂಗಾರಪ್ಪಗೆ ಸಿಕ್ತಿದ್ಯಾ ಸಚಿವ ಸ್ಥಾನ..! ಇದು ದೇವೇಗೌಡರ ಹೊಸ ರಣ ತಂತ್ರ..!!
ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಇದರ ಹಿನ್ನಲೆಯಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಭರ್ಜರಿ ಗೆಲುವನ್ನು ಸಾಧಿಸಿದೆ.
ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ ರವರು ಸೋತರು ಕೂಡ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಿಎಂ ಕುಮಾರಸ್ವಾಮಿಯವರ ಸಂಪುಟಕ್ಕೆ ಸೇರಿಸಿಕೊಳ್ಳುವ ಎಲ್ಲಾ ರೀತಿಯ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಂತರ ಅವರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿ ಮುಂಬರುವ 2019ರ ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ತಮ್ಮತಮ್ಮ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ನೀಡಲಾಗುತ್ತದೆ. ಇದು ದೇವೇಗೌಡರ ಹೊಸ ರಣತಂತ್ರವಾಗಿದ್ದು, ಕುಮಾರಸ್ವಾಮಿಯವರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Comments