ಮಧು ಬಂಗಾರಪ್ಪಗೆ ಮತ್ತೊಂದು ಆಫರ್ ಕೊಟ್ಟ ಮೈತ್ರಿ ಸರ್ಕಾರ..!

08 Nov 2018 11:18 AM |
15888 Report

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಸುದ್ದಿಗಾರರ ಜೊತೆ ಮಾತನಾಡಿ ಮುಂದಿನ ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂಬ ಸೂಚನೆ ಕೊಟ್ಟಿದಾರೆ.

ಶಿವಮೊಗ್ಗ ಉಪ ಚುನಾವಣೆ ಬಗ್ಗೆ ಮಾತನಾಡಿದ ಎಚ್. ವಿಶ್ವನಾಥ್ ಶಿವಮೊಗ್ಗದಲ್ಲಿ ನಾವು ಈಗ ಸೋತಿರಬಹುದು ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಗೆಲುವು ಸಾಧಿಸಿದ್ದೇವೆ.
ಮುಂದಿನ ಲೋಕಸಭಾ ಚುನಾವಣೆಗೆ ಇದು ಒಳ್ಳೆಯ ವೇದಿಕೆಯಾಗಿದ್ದು, ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಅವರೇ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳ ಹೊಂದಾಣಿಕೆಯಾಗಿದ್ದು, ಇನ್ನುಳಿದ 25 ಕ್ಷೇತ್ರಗಳ ಮೈತ್ರಿ ಬಗ್ಗೆ ಶೀಘ್ರ ಕಾಂಗ್ರೆಸ್‌ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ

Edited By

hdk fans

Reported By

hdk fans

Comments