ಗೌಡರ ಆಟಕ್ಕೆ ಜೈ ಅಂದ ನಾಯ್ಡು

ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ನಾಯ್ಡು ಅವರು ಸುಮಾರು 45 ನಿಮಿಷಗಳ ಕಾಲ ಸಮಾಲೋಚನೆ ನಡೆಸಿದ್ದು, ದೇಶದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿಯನ್ನು ಕಟ್ಟುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗುರುವಾರ ಮಹತ್ವದ ಮಾತುಕತೆ ನಡೆಸಿದ್ದಾರೆ.
ರಾಜಕೀಯ ಬೆಳವಣಿಗೆ ಬಗ್ಗೆ ಸಾಕಷ್ಟು ಮಾತುಕತೆಗಳು ನಡೆದಿದ್ದು ಮುಖ್ಯವಾಗಿ ರಾಷ್ಟ್ರದ ಪ್ರಮುಖ ನಾಯಕರ ಭ್ರಷ್ಟಾಚಾರವನ್ನು ಯಾವ ರೀತಿ ಬಯಲಿಗೆ ಎಳೆಯುವುದು, ಬೇರೆ ಬೇರೆ ರಾಜ್ಯಗಲ್ಲಿ ಚುನಾವಣೆ ಮೈತ್ರಿ ಮಾಡಿಕೊಂಡರೆ ಏನೆಲ್ಲ ಲಾಭವಾಗುವುದು ಎಂಬುದರ ಬಗ್ಗೆ ಮಾತುಕತೆ ನಡೆದಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾತನಾಡಿ ದೇಶವನ್ನು ಉಳಿಸಲು ಜಾತ್ಯತೀತ ಪಕ್ಷಗಳು ಒಂದಾಗಬೇಕು. ದೇವೇಗೌಡರ ಸಲಹೆ, ಸೂಚನೆಯಿಂದ ದೇಶಕ್ಕೆ ಒಳಿತಾಗುತ್ತದೆ. ನಮಗೆ ಪ್ರಧಾನಿ ಅಭ್ಯರ್ಥಿ ಯಾರೆಂಬುದು ಮುಖ್ಯವಲ್ಲ. ದೇಶಕ್ಕೆ ಒಳಿತಾಗಬೇಕು. ನಾವೆಲ್ಲರೂ ಒಂದಾಗಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.
Comments