ಇತಿಹಾಸ ನಿರ್ಮಿಸಲಿರುವ ಸಿಎಂ ಕುಮಾರಸ್ವಾಮಿ..! ಕಾರಣ ಏನ್ ಗೊತ್ತಾ..?

ಇತ್ತಿಚಿಗೆ ನಡೆದ ಉಪಚುನಾವಣೆಯ ಫಲಿತಾಂಶದಲ್ಲಿ ಜೆಡಿಎಸ್ ಭರ್ಜರಿ ಗೆಲುವನ್ನು ಸಾಧಿಸಿದೆ. ರಾಮನಗದ ಅಭ್ಯರ್ಥಿಯಾದ ಅನಿತಾ ಕುಮಾರಸ್ವಾಮಿಯವರು ಕೂಡ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ..
ಪತ್ನಿಯೊಂದಿಗೆ ವಿಧಾನಸಭೆ ಪ್ರವೇಶಿಸುವ ಮೂಲಕ ಸಾಧನೆ ಮಾಡಿದ ಕರ್ನಾಟಕದ ಮೊದಲ ಮುಖ್ಯಮಂತ್ರಿ ಎಂಬ ಪ್ರಶಂಸೆಗೆ ಎಚ್ ಡಿ ಕುಮಾರಸ್ವಾಮಿ ಪಾತ್ರರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಾಮನಗರ ಮತ್ತು ಮಧುಗಿರಿ ಶಾಸಕರಾಗಿ ಎಚ್ ಡಿ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ವಿಧಾನಸಭೆ ಪ್ರವೇಶ ಮಾಡಿದರೂ ಕೂಡ ಕುಮಾರಸ್ವಾಮಿ ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿರಲಿಲ್ಲ. ಆದರೆ ಈಗ ರಾಮನಗರದಲ್ಲಿ ಜಯ ಸಾಧಿಸುವ ಮೂಲಕ ಪತಿಯೊಂದಿಗೆ ಅನಿತಾ ಅವರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ.
Comments