ಸಿಎಂ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಕೊಟ್ಟಿದ್ದು ಯಾರಿಗೆ ಗೊತ್ತಾ..?

ಇಂದು ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತಿದ್ದಾರೆ. ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವುದರಿಂದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಯಾವುದೇ ರೀತಿಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದ್ದಾರೆ. ತಾವು ಮೂಢನಂಬಿಕೆಯ ವಿರೋಧಿಯಾಗಿದ್ದು, ಅಧಿಕಾರ ಕಳೆದುಕೊಳ್ಳುವ ಭೀತಿ ಇಲ್ಲ. ಈ ಬಗ್ಗೆ ಯಾರು ಮಾತನಾಡಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯಾದ್ಯಂತ ನಡೆಯುತ್ತಿರುವ ಹಜರತ್ ಟಿಪ್ಪುಸುಲ್ತಾನ್ ಜಯಂತಿ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.
Comments