ಕೇಂದ್ರ ಸಚಿವ ಅನಂತಕುಮಾರ್ ಇನ್ನಿಲ್ಲ..... ರಾಜ್ಯದಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ
ಸಚಿವ ಅನಂತಕುಮಾರ್ [59] ಇಂದು ನಿಧನರಾಗಿದ್ದಾರೆ, ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಬೆಳಗಿನ ಜಾವ 2 ಘಂಟೆಗೆ ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ, ಸಚಿವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಸಚಿವ ಅನಂತಕುಮಾರ್ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾನ್ಹ ಹನ್ನೆರಡು ಘಂಟೆಗೆ ದೊಡ್ಡಬಳ್ಳಾಪುರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಸಂತಾಪಸೂಚಕ ಸಭೆ ಕರೆಯಲಾಗಿದೆ, ಕಾರ್ಯಕರ್ತರು ಭಾಗವಹಿಸಲು ಬೆಂ.ಗ್ರಾ.ಜಿಲ್ಲಾ ಯುವ ಮೋರ್ಚ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಕೋರಿದ್ದಾರೆ. ರಾಜ್ಯದಾದ್ಯಂತ ಇಂದು ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ಸರ್ಕಾರದಿಂದ ರಜೆ ಘೋಷಿಸಲಾಗಿದೆ.
Comments