ಮೈತ್ರಿ ಸರ್ಕಾರದಿಂದ ಭತ್ತಕ್ಕೆ ಬೆಂಬಲ ಬೆಲೆ ಘೋಷಣೆ
ರಾಜ್ಯದ ರೈತರಿಗೆ ಮೈತ್ರಿ ಸರಕಾರ ಸಿಹಿಸುದ್ದಿ ನೀಡಿದ್ದು ರಾಜ್ಯದಲ್ಲಿ ರೈತರ ಸಂಕಷ್ಟಕ್ಕೆ ಧಾವಿಸಿದ ರಾಜ್ಯಸರಕಾರ ಪ್ರತಿ ಕ್ವಿಂಟಲ್ ಬತ್ತಕ್ಕೆ 1600 ರೂ. ನಂತೆ ಖರೀದಿಸಲು ನಿರ್ಧರಿಸಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿರವರು ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ತಕ್ಷಣವೇ ಮಧ್ಯಪ್ರವೇಶಿಸಿ ಪ್ರತಿಕ್ವಿಂಟಾಲ್ ಭತ್ತಕ್ಕೆ 1600 ರೂ.ನಂತೆ ಖರೀದಿಸುವಂತೆ ಆದೇಶ ನೀಡಿದರು.
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ರವರು ಭತ್ತ ಬೆಳೆದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಟ್ಟರು.ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ರವರು ಮಂಡ್ಯದಲ್ಲಿ ಭತ್ತ ನಟಿ ಮಾಡಿ ರೈತರ ಜೊತೆ ನೀತಿದರು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಭತ್ತದ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಆದೇಶ ನೀಡಿದರೆ.
Comments