ಮಾಜಿ ಸಚಿವ ಜನಾರ್ದನ ರೆಡ್ಡಿ ಮಾತಿಗೆ ಟಾಂಗ್ ಕೊಟ್ಟ ಸಿಎಂ ಕುಮಾರಸ್ವಾಮಿ..!!
ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಸಿರುವುದರಲ್ಲಿ ನನ್ನ ಪಾತ್ರ ಇಲ್ಲ ಹಾಗೂ ಅವರ ವಿರುದ್ಧ ನಾನು ಯಾವುದೇ ರೀತಿಯ ಷಡ್ಯಂತ್ರ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಅಷ್ಟೆ ಅಲ್ಲದೆ ಜನಾರ್ದನ ರೆಡ್ಡಿ ಬುಧವಾರ ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸಿಎಂ ಕುಮಾರಸ್ವಾಮಿ ತಮ್ಮ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಆ್ಯಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕೆಲಸವನ್ನು ತಾವು ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ದ್ವೇಷದ ರಾಜಕಾರಣವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.. ಸಾರ್ವಜನಿಕರ ಹಣ ತೆಗೆದುಕೊಂಡು ಹೋಗಿ ತಿರುಪತಿಯ ಹುಂಡಿಗೆ ಹಾಕಿದ್ದೇನೆ ಎಂದು ಹೇಳುವ ಹಿಂದಿನ ಅರ್ಥವೇನು ಎಂದು ಸಿಎಂ ಕುಮಾರಸ್ವಾಮಿಯವರು ಪ್ರಶ್ನೆ ಮಾಡಿದ್ದಾರೆ.
Comments