ಸುರೇಶ್ ಕುಮಾರ್ ಹೇಳಿಕೆಗೆ ತಿರುಗೇಟು ಕೊಟ್ಟ ನಿಖಿಲ್ ಕುಮಾರಸ್ವಾಮಿ..!!

ರೈತರ ಪ್ರತಿಭಟನೆಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಾಗ ಗುಪ್ತಚರ ಇಲಾಖೆ ಮಾಹಿತಿಯನ್ನು ಉಲ್ಲೇಖಿಸಿದ್ದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
"ಗುಪ್ತಚರ ವರದಿ ಏನು ಅಷ್ಟು ಸಲೀಸಾ? ಗುಪ್ತಚರ ವರದಿ ಸಿಗೋದಕ್ಕೆ ನಿಖಿಲ್ ಅಧಿಕಾರವೇನು?" ಎಂದು ರಾಜಾಜೀನಗರ ಶಾಸಕ ಸುರೇಶ್ ಕುಮಾರ್ ಟ್ವೀಟ್ ಮಾಡಿದರು ಇದಕ್ಕೆ ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್ ಬುಕ್ ನಲ್ಲಿ ತಿರುಗೇಟು ಕೊಟ್ಟಿದಾರೆ. ನಾನು ನೀಡಿದ ಒಂದು ಹೇಳಿಕೆಯನ್ನು ವಿರೋಧ ಪಕ್ಷದವರು ತಪ್ಪಾಗಿ ಬಿಂಬಿಸಿದ್ದಾರೆ. ನಾನು ಸನ್ಮಾನ್ಯ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಮಗನಾಗಿ ಈ ಹೇಳಿಕೆಯನ್ನು ನೀಡಿಲ್ಲ. ನಾನು ಜೆಡಿಎಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಎನ್ನುವುದು ವಿರೋಧ ಪಕ್ಷದವರು ಮರೆಯುತ್ತಿದ್ದಾರೆ. ವಿರೋಧ ಪಕ್ಷದವರು ನಮ್ಮ ಸರ್ಕಾರವನ್ನು ಹಾಳು ಮಾಡಲು ಈ ರೀತಿ ಪಿತೂರಿಗಳು ನಡೆಸುತ್ತಿರುವುದರ ಬಗ್ಗೆ ಪಕ್ಷದ ಕಾರ್ಯಕರ್ತನಾಗಿ ನನಗೆ ಅರಿವಿದೆ. ರಾಜಕೀಯದಲ್ಲಿ ಹೆಸರು ಮಾಡಲು ವಿರೋಧ ಪಕ್ಷದವರು ಯಾವುದೇ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ.
ಇತ್ತೀಚೆಗೆ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಶ್ರೀ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ನನ್ನ ಅಭಿಪ್ರಾಯವು ಸರ್ಕಾರದ ಭಾವನೆಗಳನ್ನು ಪ್ರತಿಧ್ವನಿಸುತ್ತಿದೆ. ಈ ಸನ್ನಿವೇಶದಲ್ಲಿ ಎಲ್ಲರೂ ವಿಶೇಷವಾಗಿ ನನ್ನ ಸ್ನೇಹಿತರು ಹಾಗೂ ಮಾಧ್ಯಮದವರನ್ನು ಎಚ್ಚರಿಕೆಯಿಂದ ವರ್ತಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
Comments