22 ನೇ ವರ್ಷದ ಕಡಲೆಕಾಯಿ ಪರಿಷೆ ಬಯಲು ಬಸವಣ್ಣ ದೇವಸ್ಥಾನದಲ್ಲಿ







ಕಾರ್ತೀಕ ಮಾಸದ ಕಡೆಯ ಸೋಮವಾರದ ಅಂಗವಾಗಿ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಬಯಲು ಬಸವಣ್ಣ ದೇವಸ್ಥಾನದಲ್ಲಿ 22 ನೇ ವರ್ಷದ ಕಡಲೆಕಾಯಿ ಪರಿಷೆಯನ್ನು ಶ್ರೀ ಬಯಲು ಬಸವಣ್ಣ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿ ದೇವಸ್ಥಾನದಲ್ಲಿ ವಿಷೇಶ ಅಲಂಕಾರ ಮಾಡಲಾಗಿತ್ತು, ಬೆಳಿಗ್ಗೆಯಿಂದಲೇ ನಗರದ ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಕಡಲೇಕಾಯಿ ಪ್ರಸಾದವನ್ನು ಸ್ವೀಕರಿಸಿದರು. ಸಂಜೆ ಶಾಸಕ ವೆಂಕಟರಮಣಯ್ಯ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಬಂದಿದ್ದ ಭಕ್ತರಿಗೆ ಕಡಲೇಕಾಯಿ ವಿತರಿಸಿದರು. ಕಾರ್ಯಕ್ರಮದಲ್ಲಿ ಬಯಲು ಬಸವಣ್ಣ ಸೇವಾ ಟ್ರಸ್ಟ್ ಪದಾಧಿಕಾರಿಗಳು ಭಾಗವಹಿಸಿದ್ದರು.
Comments