ಇತಿಹಾಸ ಪ್ರಸಿದ್ಧ ಸ್ವಯಂಭುವೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವಕ್ಕೆ ಶಾಸಕ ವೆಂಕಟರಮಣಯ್ಯ ಚಾಲನೆ
ನಗರದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ಧವಾದ ಸ್ವಯಂಭುವೇಶ್ವರ [ಸೋಮೇಶ್ವರ] ದೇವಸ್ಥಾನದಲ್ಲಿ ಶಾಸಕ ವೆಂಕಟರಮಣಯ್ಯ ಕಾರ್ತೀಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ಏರ್ಪಡಿಸಲಾಗಿದ್ದ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿದರು, ಸೋಮೇಶ್ವರ ಮತ್ತು ಪಾರ್ವತಿ ದೇವಿಗೆ ವಿಷೇಶ ಹೂವಿನ ಅಲಂಕಾರ ಮಾಡಲಾಗಿತ್ತು, ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು. ಸಂಜೆ ಆರು ಘಂಟೆಯಿಂದ ಲಕ್ಷದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಹಿಳೆಯರು, ಹೆಣ್ಣುಮಕ್ಕಳು ಭಕ್ತಿಯಿಂದ ದೀಪ ಬೆಳಗಿಸಿ ಸೋಮೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು, ಬಂದಿದ್ದ ಭಕ್ತರಿಗೆ ಪ್ರಸಾದ ವ್ಯವಸ್ತೆ ಮಾಡಲಾಗಿತ್ತು.
Comments