ಜೆಡಿಎಸ್ ಗೆ ಐವರು ನೂತನ ಕಾರ್ಯಾಧ್ಯಕ್ಷರು..!!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅತಿ ಹೆಚ್ಚು ಸಾಧನೆಯ ಮೂಲಕ ಪಕ್ಷವನ್ನು ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಸಂಘಟನೆ ಚಟುವಟಿಕೆಗಳಿಗೆ ಒತ್ತು ನೀಡುವ ಉದ್ದೇಶದಿಂದ ಐವರು ನೂತನ ಕಾರ್ಯಾಧ್ಯಕ್ಷರ ನಿಮಕಕ್ಕೆ ಜೆಡಿಎಸ್ ಬಯಸಿದೆ.
ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾಗಿದೆ ಎಂಬ ಆರೋಪದಿಂದ ಹೊರಬಂದು ಜೆಡಿಎಸ್ ಪಪಕ್ಷವನ್ನು ವಿಸ್ತರಿಸಿ ಬಲಪಡಿಸಲು ತೀರ್ಮಾನಿಸಿದೆ ಈ ಕುರಿತು ಗುರುವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗುರುವಾರ ಸಂಜೆ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
Comments