ಕಿರಿಯ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವ ಕು.ಪೂಜಾಶ್ರೀ ಯವರಿಗೆ ಸನ್ಮಾನ





ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ, ದೊಡ್ದಬಳ್ಳಾಪುರ ಘಟಕದ ವತಿಯಿಂದ ಇಂದು ಬೆಳಿಗ್ಗೆ ದೊಡ್ಡಬಳ್ಳಾಪುರದ ಮೊದಲ ಮಹಿಳಾ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಎಚ್. ಎಸ್. ಪೂಜಾಶ್ರೀ ಅವರನ್ನು ಅವರ ಸ್ವಗೃಹದಲ್ಲಿ ಶುಭಕೋರಿ ಸನ್ಮಾನಿಸಲಾಯಿತು. ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಎಸ್. ಕೃಷ್ಣಕುಮಾರ್, ಉಪಾಧ್ಯಕ್ಷ ನಾಗರಾಜ್.ಎಂ ಕಾರ್ಯದರ್ಶಿ ಲಕ್ಷ್ಮೀನಾರಾಯಣ. ಬಿ.ಸಿ. ಕಾರ್ಯಾಧ್ಯಕ್ಷ ಕುಮಾರ್, ಸಂಘಟನಾ ಕಾರ್ಯದರ್ಶಿಗಳಾದ ಗಿರೀಶ್, ಗಂಗಾಧರ್, ಮತ್ತು ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು. ಕರ್ನಾಟಕ ನೇಕಾರರ ರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ, ಕಾರ್ಯದರ್ಶಿ ವತ್ಸಲಾ, ಸದಸ್ಯರಾದ ಗಾಯತ್ರಿ ,ಗೌರಿ, ವಿಶಾಲಾಕ್ಷಿ ,ಮಣಿಯಮ್ಮ ಭಾಗವಹಿಸಿದ್ದರು.
Comments