ಕಾಂಗ್ರೆಸ್ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ : ಇದರ ಹಿಂದಿರುವ ಸೀಕ್ರೇಟ್ ಏನ್ ಗೊತ್ತಾ..!?
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ಹಿಂತಿರುಗಿದ ಮಾರನೇ ದಿನ ಡಿ.18ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗಿದೆ ಎಂಬುದು ಎಲ್ಲರಿಗೂ ಕೂಡ ತಿಳಿದೆ ಇದೆ. ಆದರೆ ಈ ಸಭೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದೀಗ ಈ ಅನುಮಾನಕ್ಕರೆ ತೆರೆ ಎಳಿದಿದ್ದು ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರಿಗೆ ಅಧಿಕೃತವಾಗಿಯೇ ಸಭೆಗೆ ಬರುವಂತೆ ಕಾಂಗ್ರೇಸ್ ನಾಯಕರು ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಸಭೆಗೆ ಬರುವ ನಿರೀಕ್ಷೆಯನ್ನು ಕಾಂಗ್ರೆಸ್ ಹೊಂದಿದೆ. ಈ ಬಗ್ಗೆ ಜೆಡಿಎಸ್ ಮೂಲಗಳನ್ನು ಪ್ರಶ್ನಿಸಿದರೆ, ಕಾಂಗ್ರೆಸ್ ಆಹ್ವಾನ ನೀಡಿದರೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುವರು ಎಂದು ಹೇಳುತ್ತಿವೆ. ಹಾಗಾಗಿ ಕಾಂಗ್ರೆಸ್ ನಾಯಕರೆ ಜೆಡಿಎಸ್ ನಾಯಕನ ಮೇಲೆ ಒಲವು ತೋರಿಸುತ್ತಿದ್ದಾರೆ ಎಂಬ ಪ್ರಶ್ನೆಗಳು ತಲೆ ಎತ್ತುತ್ತಿವೆ.
Comments