ಲೋಕ ಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಇವರೆ..!?

11 Dec 2018 11:37 AM |
1205 Report

ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ  ರೀತಿಯ ಸಿದ್ದತೆಗಳನ್ನು ಎಲ್ಲಾ ಪಕ್ಷದವರು ಮಾಡಿಕೊಳ್ಳುತ್ತಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಜೆಡಿಎಸ್ ನಿಂದ ಸ್ಪರ್ಧೆ ಮಾಡುತ್ತೇನೆ ಎಂದು ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ.

ಮಂಡ್ಯದ ಡಿಸಿ ಕಚೇರಿಯಲ್ಲಿ ಇಂದು ನೂತನ ಜನಸಂಪರ್ಕ ಕಚೇರಿಯನ್ನು ತೆರೆದಿದ್ದು, ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭಾರೀ ಅಂತರದ ಗೆಲುವು ಸಾಧಿಸಿದ್ದ ಶಿವರಾಮೇಗೌಡರು, ಮತ್ತೊಮ್ಮೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸೆಯನ್ನು ಹೊರಹಾಕಿದ್ದಾರೆ.

Edited By

hdk fans

Reported By

hdk fans

Comments