ಡಿ.ಕೆ.ಶಿವಕುಮಾರ್ ಬಗ್ಗೆ ದೇವೇಗೌಡರು ಬಿಚ್ಚಿಟ್ರು ಸೀಕ್ರೆಟ್..!! ಏನ್ ಗೊತ್ತಾ..?
ರಾಜ್ಯದಲ್ಲಿ ಕಾಂಗ್ರೆಸ್ ನ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಅಧಿಕಾರದ ಮಾಡುವ ಆಸೆಯಿಂದಲ್ಲ. ದೇಶದಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ಕೇಂದ್ರದಲ್ಲಿರುವ ಕೆಟ್ಟಆಡಳಿತವನ್ನು ತೊಲಗಿಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಜೊತೆಗೂಡಿದ್ದೇವೆ ಎಂದರು.
ಇನ್ನು ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾತನಾಡಿ ನಮ್ಮ ಮತ್ತು ಅವರ ನಡುವೆ ಒಂದಷ್ಟು ವ್ಯತ್ಯಾಸಗಳು ಇದ್ದದ್ದು ನಿಜ , ಆದರೆ ಜಾತ್ಯತೀತ ಶಕ್ತಿಗಳು ಬಲಗೊಳ್ಳಬೇಕು ಎಂಬ ಕಾರಣಕ್ಕಾಗಿಯೇ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕೇಂದ್ರದಲ್ಲಿ ನಡೆಯುತ್ತಿರುವ ಸಿಬಿಐ, ಇಡಿ ಸೇರಿ ಎಲ್ಲ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿರೋಧ ಪಕ್ಷಗಳನ್ನು ಸಂಪೂರ್ಣವಾಗಿ ದಮನ ಮಾಡುವ ಪ್ರಯತ್ನಗಳು ನಿರಂತರವಾಗಿ ನಡೆದಿವೆ. ಪ್ರಾದೇಶಿಕ ಪಕ್ಷಗಳನ್ನು ಹತ್ತಿಕ್ಕುವ ಕುತಂತ್ರಕ್ಕೆ ಕೈ ಹಾಕಿದೆ. ದೇಶದ ಸಮಗ್ರತೆ ಹಾಗೂ ಐಕ್ಯತೆ ದೃಷ್ಟಿಯಿಂದ ನಾವೆಲ್ಲರೂ ಜೊತೆಗೂಡಿ ಹೋರಾಟ ನಡೆಸುವುದು ಅನಿವಾರ್ಯವೂ ಆಗಿದೆ ಎಂದರು.
Comments