ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ ದೇವೇಗೌಡ–ಸಿದ್ದರಾಮಯ್ಯ..!! ಕಾರಣ ಏನ್ ಗೊತ್ತಾ..?

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತಷ್ಟು ಹತ್ತಿರವಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.ಇದಕ್ಕೆ ಪೂರಕವೆಂಬಂತೆ ಈ ಇಬ್ಬರು ಹಳೇದೋಸ್ತಿಗಳು ರಾಜ್ಯಸ್ಥಾನ ಹಾಗೂ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ವಿರುದ್ಧ ಸಂದೇಶ ರವಾನಿಸಲು ಒಟ್ಟಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಹಾಗೂ ದೇವೇಗೌಡ ಒಟ್ಟಿಗೆ ವಿಮಾನವನ್ನು ಹತ್ತಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯಮಟ್ಟದಲ್ಲಿ ಮೈತ್ರಿ ಶಕ್ತಿಯುತವಾಗಿದ್ದು, ರಾಷ್ಟ್ರಮಟ್ಟದಲ್ಲೂ ಮೈತ್ರಿ ಗಟ್ಟಿಯಾಗಲಿ ಅನ್ನೋ ಸಂದೇಶ ರವಾನಿಸಲು ಕಾಂಗ್ರೆಸ್ ಹೈಕಮಾಂಡ್ ಉದ್ದೇಶವಾಗಿದೆ ಎನ್ನಲಾಗುತ್ತಿದೆ.
Comments