ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಶಾಸಕ ಟಿ.ವೆಂಕಟರಮಣಯ್ಯ
ದೊಡ್ಡಬಳ್ಳಾಪುರ ತಾಲೂಕಿನ ಶಾಸಕ ಟಿ ವೆಂಕಟರಮಣಯ್ಯ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ, ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಮಾಧಾನ ತಂದಿದೆ, ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಗಮನ ನೀಡುವ ಮೂಲಕ ಪಕ್ಷ ನನಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವೆ ಎಂದು ಶಾಸಕ ವೆಂಕಟರಮಣಯ್ಯ ಹೇಳಿದರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನಲೆಯಲ್ಲಿ ಶನಿವಾರ ದೊಡ್ಡಬಳ್ಳಾಪುರ ನಗರದ ಪರಿವೀಕ್ಷಣಾ ಮಂದಿರದಲ್ಲಿ ಪಕ್ಷದ ಮುಖಂಡರು, ಅಭಿಮಾನಿಗಳು ಸನ್ಮಾನಿಸಿದ ಸಂದರ್ಭದಲ್ಲಿ ಮಾತನಾಡುತ್ತಾ ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳು ಎಂದಿನಂತೆ ನೆಡೆಯಲಿವೆ, ನಿಗಮದಿಂದ ತಾಲೂಕಿಗೆ ಹೆಚ್ಚು ಅನುದಾನ ತರುವ ಮೂಲಕ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು, ರಾಜ್ಯದ ವಿವಿಧ ಕಡೆಗಳಲ್ಲಿ ಸಂಚರಿಸಿ ಅಗತ್ಯವಿರುವ ರಸ್ತೆಗಳ ಅಭಿವೃದ್ಧಿ ಶ್ರಮಿಸುತ್ತೇನೆ ಎಂದರು.
ಮಾನ್ಯ ಶಾಸಕರು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ನಗರದ ಹಿರಿಯ ವಾಣಿಜ್ಯೋದ್ಯಮಿ ಹೆಚ್.ಪಿ.ಶಂಕರ್ ಅಭಿನಂದಿಸಿದ್ದಾರೆ, ದೊಡ್ಡಬಳ್ಳಾಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಅಶೋಕ್, ಕೆಪಿಸಿಸಿ ಸದಸ್ಯ ಎಂ.ಜಿ. ಶ್ರೀನಿವಾಸ್, ದೇವಾಂಗ ಮಂಡಲಿ ಮಾಜಿ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ, ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರಮೀಳ ಮಹಾದೇವ್, ಬಿಜೆಪಿ ಮುಖಂಡರಾದ ಲೀಲಾ ಮಹೇಶ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಅಭಿನಂದಿಸಿದ್ದಾರೆ.
Comments