2019 ರ ಲೋಕಸಭೆ ಚುನಾವಣೆ ಗೆ ಪ್ರಜ್ವಲ್ ರೇವಣ್ಣ ಸ್ಪರ್ಧೆ..! ಯಾವ ಕ್ಷೇತ್ರ ಗೊತ್ತಾ..?
ಮುಂಬರುವ 2019 ರ ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಎಲ್ಲಾ ಪಕ್ಷದವರು ಮಾಡಿಕೊಳ್ಳುತ್ತಿದ್ದಾರೆ.. ಮಾಜಿ ಪ್ರಧಾನಿ ಹೆಚ್.ಡಿ .ದೇವೇಗೌಡರ ಮೊಮ್ಮಗರಾದ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದೇ ನಿರಾಶರಾಗಿದ್ದ ಪ್ರಜ್ವಲ್ ರೇವಣ್ಣ,ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಜೆಡಿಎಸ್ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು, ಆದರೆ ಕೊನೆ ಕ್ಷಣದಲ್ಲಿ ಸ್ಪರ್ಧೆಗೆ ಅವಕಾಶ ಸಿಗದೆ ಇದ್ದ ಕಾರಣ ಇದೀಗ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.ಜೆಡಿಎಸ್ನಿಂದ ಈ ಬಾರಿ ಪ್ರಜ್ವಲ್ ರೇವಣ್ಣ ಅಖಾಡಕ್ಕೆ ಇಳಿಯುತ್ತಾರೆ..
Comments