ಮೋದಿಗೆ ಖಡಕ್ ಎಚ್ಚರಿಕೆ ಕೊಟ್ಟು ಗರಂ ಆದ ದೇವೇಗೌಡರು..!!

ಸಾಲ ಮನ್ನಾ ಎನ್ನುವುದು ದಿನದಿಂದ ದಿನಕ್ಕೆ ಕಗ್ಗಂಟಾಗಿ ಹೋಗುತ್ತಿದೆ ಅನಿಸುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ರೈತರ ಸಮಸ್ಯೆಗಳನ್ನು ಆಲಿಸುತ್ತಿದ್ದು ಸಾಲ ಮನ್ನಾಗೆ ಮುಂದಾಗಿದೆ. ಇದರ ಬೆನ್ನಲೆ 'ರೈತರ ಸಮಸ್ಯೆಗಳನ್ನು ಕಡೆಗಣಿಸಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ ಸಹ ಸೋಲನುಭವಿಸಿತ್ತು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರ ಕಷ್ಟ ಅರ್ಥಮಾಡಿಕೊಂಡು ಸಾಲಮನ್ನಾ ಸೇರಿದಂತೆ ಪರಿಹಾರ ಪ್ಯಾಕೇಜ್‌ಗಳನ್ನು ಘೋಷಿಸಬೇಕು' ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಕರ್ನಾಟಕದಿಂದ 2,500 ರೈತರನ್ನು ಕರೆದುಕೊಂಡು ದೆಹಲಿಗೆ ಬಂದಿದ್ದೆ. ಆಗಿನ ಪರಿಸ್ಥಿತಿ ತುಂಬಾ ಶೋಚನೀಯವಾಗಿತ್ತು. ಆ ಅವಧಿಯಲ್ಲಿ ಸುಮಾರು 1,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಷ್ಟ್ರಮಟ್ಟದಲ್ಲಿ 10,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈತರಿಗೆ ನೆರವಾಗುವುದಾಗಿ ವಾಜಪೇಯಿ ಭರವಸೆ ನೀಡಿದ್ದರು. ಆದರೆ ಅವರ ಪಕ್ಷವು 'ಇಂಡಿಯಾ ಶೈನಿಂಗ್' ಧ್ಯೇಯವಾಕ್ಯದೊಂದಿಗೆ ಚುನಾವಣೆ ಎದುರಿಸಿ ಸೋಲನುಭವಿಸಿತ್ತು' ಎಂದು ದೇವೇಗೌಡ ತಿಳಿಸಿದ್ದಾರೆ. ಆದಷ್ಟು ರೈತರ ಸಾಲಮನ್ನಾದ ಬಗ್ಗೆ ಗಮನ ಹರಿಸಿ ಎಂದಿದ್ದಾರೆ.
Comments