ಜೆಡಿಎಸ್ ದೊಡ್ಮನೆಯಿಂದ ಚುನಾವಣೆಯ ಅಖಾಡಕ್ಕಿಳಿಯಲಿದ್ದಾರೆ ಈ ಕುಡಿಗಳು ..!? ಯಾರು ಗೊತ್ತಾ..?
ಮುಂದಿನ ಚುನಾವಣಗೆ ಈಗಾಗಲೇ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ, ಅ ದೇ ರೀತಿ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಚವಣೆ ಸಿದ್ದತೆ ಹಾಗೂ ಪಕ್ಷ ಸಂಘಟನೆ ಸೇರಿದಂತೆವಿವಿಧ ವಿಚಾರಗಳ ಬಗ್ಗೆ ಚರ್ಚಿಸಲು ಇಂದು ಜೆಡಿಎಸ್ ಮಹತ್ವದ ಸಭೆ ನಡೆಸಲಿದೆ ಎಂದು ಹೇಳಲಾಗುತ್ತಿದೆ.ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಜೆಡಿಎಸ್ ವರಿಷ್ಟ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ್. ಸಚಿವರು, ಮಾಜಿ ಸಚಿವರು. ಶಾಸಕರು. ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ..
ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಕುರಿತಂತೆ ಚರ್ಚೆ ನಡೆಯಲಿದ್ದು, ಪ್ರಜ್ವಲ್ ರೇವಣ್ಣ ಹಾಗೂ ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸರ್ಧೆ ಕುರಿತಂತೆ ಸಭೆಯಲ್ಲಿ ತೀರ್ಮಾನ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.ಕಾಂಗ್ರೆಸ್ ಜೊತೆ ಮೈತ್ರಿ ಆದರೆ ಜೆಡಿಎಸ್ ಗೆ ಎಷ್ಟು ಸ್ಥಾನ, ಒಂದು ವೇಳೆ ಇದಕ್ಕೆ ಕಾಂಗ್ರೆಸ್ ಒಪ್ಪದಿದ್ದರೆ ಏಕಾಂಗಿ ಹೋರಾಟದ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದ್ದು, ಚುನಾವಣೆ ಪ್ರಚಾರದ ಉಸ್ತುವಾರಿ ನೇಮಕ ಸೇರಿದಂತೆ 28 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಗುರುತಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಯಾರು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
Comments