ಲೋಕಸಭೆ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ..!! ಅಖಾಡದಲ್ಲಿ ಇರೋದು ಯಾರು..?
ಈಗಾಗಲೇ ರಾಜ್ಯ ಸರ್ಕಾರದಲ್ಲಿ ದೋಸ್ತಿ ಸರ್ಕಾರವು ತನ್ನದೆ ಆದ ಕಾರ್ಯ ವೈಖರಿಯನ್ನು ತೋರಿಸಿದೆ.. ರೈತರ ಸಾಲ ಮನ್ನಾ ಕುರಿತು ಸಾಕಷ್ಟು ದೃಢ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿಯೇ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಗೆ ವರಿಷ್ಠರು ಭರ್ಜರಿ ಸಿದ್ದತೆಯನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.. ಪಕ್ಷದ ಕೇಂದ್ರ ಕಚೇರಿಯಲ್ಲಿಯೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು , ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ಧತಾ ಸಭೆಯನ್ನು ನಡೆಸಲಾಗಿದೆ.. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಸುವ ಬಗ್ಗೆಯೂ ಚರ್ಚೆ ನಡೆಸಲಾಯಿತು ಎನ್ನಲಾಗಿದೆ.
ಮೂರನೇ ಒಂದು ಭಾಗದಷ್ಟು ಸೀಟು ಹಂಚಿಕೆ ಪ್ರಸ್ತಾಪ ಮಾಡುವಂತಹ ಕುರಿತು ಸಭೆಯಲ್ಲಿ ವರಿಷ್ಠರು ಚರ್ಚೆ ನಡೆಸಿದ್ದು, ಸಾಕಷ್ಟು ಮಹತ್ವವನ್ನು ಪಡೆದುಕೊಂಡಿತು. ಲೋಕಸಭೆ ಚುನಾವಣೆಗೆ ಅರ್ಹ ಸ್ಪರ್ಧಾಕಾಂಕ್ಷಿಗಳನ್ನು ಕಣಕ್ಕಿಳಿಸಿ ಹೆಚ್ಚಿನ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಕೈಗೊಳ್ಳಬೇಕಾದ ಕ್ರಮ ಹಾಗೂ ಪ್ರಣಾಳಿಕೆ ಕುರಿತಂತೆ ವಿಸ್ತೃತವಾದ ಚರ್ಚೆ ನಡೆಯಿತು. ಸಭೆಯ ಪ್ರಾರಂಭದಲ್ಲಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತ್‍ಕುಮಾರ್, ಮಾಜಿ ಸಚಿವ ಹಾಗೂ ನಟ ಅಂಬರೀಶ್, ಸಿ.ಕೆ.ಜಾಫರ್ ಶರೀಫ್, ಮಾಜಿ ಶಾಸಕ ಭಕ್ತವತ್ಸಲಂ, ಉಪ ಮೇಯರ್ ರಮಿಳಾ, ಮಂಡ್ಯ ಜಿಲ್ಲೆ ಪಾಂಡವಪುರ ಬಸ್ ದುರಂತದಲ್ಲಿ ಮಡಿದವರು, ಸೂಲಗಿತ್ತಿ ನರಸಮ್ಮ, ಚಾಮರಾಜನಗರ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವನೆಯಿಂದ ಮಡಿದವರು, ಇತ್ತೀಚೆಗೆ ಹತ್ಯೆಯಾದ ಜೆಡಿಎಸ್ ಮುಖಂಡ ಪ್ರಕಾಶ್ ಹಾಗೂ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಒಟ್ಟಾರೆ ಲೋಕಸಭೆಯಲ್ಲಿ ಮೈತ್ರಿ ಬರುವುದು ಗ್ಯಾರೆಂಟಿ ಎನ್ನುವ ಭರವಸೆ ಮೂಡಿಸಿದ್ದಾರೆ.
Comments