ಸಿಎಂ ಕುಮಾರಣ್ಣನ ಪರ ಬ್ಯಾಟಿಂಗ್ ಬೀಸಿದ ಪರಮೇಶ್ವರ್..!! ಸಿದ್ದರಾಮಯ್ಯನ ಮಾತಿಗೆ ಟಾಂಗ್ ಕೊಟ್ಟ ಡಿಸಿಎಂ
ರಾಜಕೀಯ ವಲಯದಲ್ಲಿ ಒಬ್ಬೊಬ್ಬರಿಗೆ ಒಬ್ಬರು ಟಾಂಗ್ ಕೊಡುವದು ಹೊಸದೇನಲ್ಲ….ಒಂದು ಹೇಳಿಕೆಗೆ ಮತ್ತೊಬ್ಬರು ಟಾಂಗ್ ಕೊಡುವುದು ದಿನನಿತ್ಯದ ಪಾಠವಾಗಿ ಬಿಟ್ಟಿದೆ..… ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಷಯವಾಗಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿಲುವಿಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ..
ಮೂಲಕ ತಮ್ಮದೇ ಆದ ಪಕ್ಷದ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರಾದಂತಹ ಸಿದ್ದರಾಮಯ್ಯ ಅವರ ಹೇಳಿಕೆಗೆ ಪರಮೇಶ್ವರ್ ಸರಿಯಾಗಿಯೆ ಟಾಂಗ್ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಕಲಿತವರೆಲ್ಲ ದಡ್ಡರಲ್ಲ. ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಮುಖ್ಯವಾಗಬೇಕು. ಇಂಗ್ಲಿಷ್ ಮಾಧ್ಯಮ ಅಗತ್ಯ ಇಲ್ಲ ಎಂಬ ಅರ್ಥದಲ್ಲಿ ಟ್ವೀಟ್ ಮಾಡಿ ವಿರೋಧವನ್ನು ವ್ಯಕ್ತಪಡಿಸಿದ್ದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು. ತಾವು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿಲುವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
Comments