ಬಿಜೆಪಿಗೆ 'ಕೈ'ಕೊಟ್ಟ ಜೆಡಿಎಸ್..!! ಗೌಡರ ಎಂಟ್ರಿಯಿಂದಾಗಿ ಬದಲಾಗೇ ಹೋಯ್ತು ಸೀನ್..!!!
ಈಗಾಗಲೇ ರಾಜ್ಯದಲ್ಲಿ ದೋಸ್ತಿ ಸರ್ಕಾರ ಅಧಿಕಾರದಲ್ಲಿದ್ದರೂ ಕೂಡ ಎಲ್ಲೋ ಏನೋ ಮಿಸ್ ಹೊಡಿತಾ ಇದೆ ಅನಿಸುತ್ತಿದೆ.. ದೋಸ್ತಿ ಸರ್ಕಾರ ಅಸ್ತಿತ್ವದಲ್ಲಿದ್ದರೂ ಕೂಡ ಮೈಸೂರಿನಲ್ಲಿ ಕಮಲ ಪಕ್ಷದೊಂದಿಗೆ ಜೆಡಿಎಸ್ ಕೈಜೋಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ತವರಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ, ಕಾಂಗ್ರೆಸ್ ಮುಜುಗರಕ್ಕೆ ಒಳಗಾಗಿತ್ತು.ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿಯಾಗಿದ್ದು, ಅದೇ ಮೈತ್ರಿಯನ್ನು ಮುಂದುವರಿಸಲು ತೀರ್ಮಾನಿಸಲಾಗಿತ್ತು ಎನ್ನಲಾಗುತ್ತಿದೆ.
ಶನಿವಾರ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನವನ್ನು ಜೆಡಿಎಎಸ್ ಗೆ, ಉಪಾಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿತ್ತು. ಆದರೆ, ಜೆಡಿಎಸ್ ವರಿಷ್ಠರ ಪ್ರವೇಶದಿಂದಾಗಿ ಸಂಪೂರ್ಣ ಸೀನ್ ಬದಲಾಗಿ ಹೋಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವಂತೆ ವರಿಷ್ಠರು ಮೈಸೂರು ಸ್ಥಳೀಯ ಜೆಡಿಎಸ್ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಸ್ಥಳೀಯ ಮುಖಂಡರು ಒಲ್ಲದ ಮನಸ್ಸಿನಿಂದಲೇ ಬಿಜೆಪಿ ಮೈತ್ರಿ ಕಡಿತಗೊಳಿಸಿ, ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಜೆಡಿಎಸ್ ಗೆ ಅಧ್ಯಕ್ಷ ಸ್ಥಾನ ನೀಡಿದ್ದು ಕಾಂಗ್ರೆಸ್ ಸದಸ್ಯರು ಉಪಾಧ್ಯಕ್ಷರಾಗಲಿದ್ದಾರೆ. ಕೊನೆ ಕ್ಷಣದಲ್ಲಿ ವರಿಷ್ಠರ ಮಧ್ಯ ಪ್ರವೇಶದಿಂದ ಜೆಡಿಎಸ್ ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಅಂದು ಕೊಳ್ಳುವುದೇ ಒಂದು…ಆಗುವುದೆ ಒಂದು..ಎನ್ನುವುದಕ್ಕೆ ಇದೆ ಸಾಕ್ಷಿ..
Comments