ಶಿವಮೊಗ್ಗ ಲೋಕಸಭಾ ಅಖಾಡಕ್ಕೆ ಜೆಡಿಎಸ್ ಅಭ್ಯರ್ಥಿ ಇವರೇ..!?



ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎಲ್ಲಾ ಪಕ್ಷದವರು ಸಿದ್ದರಾಗುತ್ತಿದ್ದಾರೆ., ಯಾವ ಕ್ಷೇತ್ರದಲ್ಲಿ ಯಾರಿಗೆ ಪ್ರಾಬಲ್ಯ ಇದೆಯೋ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದ್ದಾರೆ… ಇದೀಗ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಶಿವಮೊಗ್ಗ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಿದೆ ಎಂದು ಹೇಳಲಾಗುತ್ತಿದೆ..
ದೋಸ್ತಿ ಪಕ್ಷದೊಂದಿಗೆ ಮೈತ್ರಿ ಚರ್ಚೆ ಮತ್ತು ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರಾಗಬೇಕೆಂಬ ಚರ್ಚೆ ನಡೆಯುತ್ತಿರುವಾಗಲೇ ಅವಿರೋಧವಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ... ಇತ್ತೀಚೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪಕ್ಷದ ಮಾಜಿ ಶಾಸಕರು, ಸ್ಥಳೀಯ ಮುಖಂಡರನ್ನೊಳಗೊಂಡ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
Comments