ಕ್ಷೇತ್ರದ ಬೇಡಿಕೆಗಳನ್ನು ಇಳಿಸಿಕೊಂಡ ಜೆಡಿಎಸ್..! ಫೈನಲ್ ಆಗಿ ಸಿಕ್ಕಾ ಕ್ಷೇತ್ರ ಎಷ್ಟು ಗೊತ್ತಾ..?
ವಿಧಾನ ಸಭಾ ಚುನಾವಣೆ ಮುಗಿದ ಮೇಲೆ ದೋಸ್ತಿ ಸರ್ಕಾರ ರಾಜ್ಯ ಸರ್ಕಾರವನ್ನು ಮುನ್ನೆಡೆಸುತ್ತಿದೆ..ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಎರಡು ಪಕ್ಷದ ನಾಯಕರು ಹೇಳಿಕೊಂಡಿದ್ದರು. ಲೋಕಸಭೆ ಚುನಾವಣೆಗೆ ಹನ್ನೆರಡು ಕ್ಷೇತ್ರಗಳ ಬೇಡಿಕೆ ಇಟ್ಟಿದ್ದ ಜೆಡಿಎಸ್ ಇದೀಗ ಕಾಂಗ್ರೆಸ್ ಮುಂದೆ 9 ಕ್ಷೇತ್ರಗಳಿಗೆ ಒಪ್ಪಿಕೊಂಡಿದೆ ಎಂದು ಹೇಳಲಾಗುತ್ತಿದೆ.. ಲೋಕಸಭೆ ಚುನಾವಣೆಯಲ್ಲಿ 12 ಕ್ಷೇತ್ರಗಳು ಬಿಟ್ಟುಕೊಡುವಂತೆ ಪಟ್ಟು ಹಿಡಿದಿದ್ದ ಜೆಡಿಎಸ್ ಈಗ ದಿಢೀರ್ ಅಂತ 9 ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ.
ನಾವು ಕೇಳಿದ 9 ಕ್ಷೇತ್ರಗಳನ್ನು ಬಿಟ್ಟುಕೊಡಿ ಆ ಎಲ್ಲಾ ಕ್ಷೇತ್ರಗಳನ್ನು ಗೆದ್ದುಕೊಂಡು ಬರುತ್ತೇವೆ ಎಂದು ಕಾಂಗ್ರೆಸ್ ಗೆ ಜೆಡಿಎಸ್ ನಾಯಕರು ಮಾಹಿತಿ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಉತ್ತರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೀದರ್ ಹಾಗೂ ರಾಯಚೂರು ಈ ಒಂಭತ್ತು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಉಳಿದ 19 ಕ್ಷೇತ್ರಗಳಲ್ಲಿ ಜೆಡಿಎಸ್ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಜೆಡಿಎಸ್ ಹೇಳಿದೆಯಂತೆ..
Comments