ಲೋಕಸಭಾ ಚುನಾವಣೆಗೆ ದೇವೇಗೌಡರ ಸ್ಪರ್ಧೆ..! ಯಾವ ಕ್ಷೇತ್ರ..!!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೆಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.. ಮಾಜಿ ಪ್ರಧಾನಿ ದೇವೆಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಅಖಾಡಕ್ಕೆ ಇಳಿಸಬೇಕು ಎಂಬುದು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ..
ಜೆಡಿಎಸ್ ಗೆ ಭದ್ರ ಬುನಾದಿ ಹಾಕಲು ಬೆಂಗಳೂರು ಉತ್ತರದಲ್ಲಿಯೇ ದೇವೆಗೌಡರು ಸ್ಪರ್ಧಿಸಬೇಕು ಎನ್ನುತ್ತಿದ್ದಾರೆ. ದೇವೇಗೌಡರು ಈ ಭಾರಿಯ ಲೋಕಸಭಾ ಚುನಾವಣೆ ತಮ್ಮ ಅಂತಿಮ ಚುನಾವಣೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಪಕ್ಷದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಬೇಕೆಂಬುದು ಎಲ್ಲರ ಒತ್ತಾಯ. ಈ ಬಗ್ಗೆ ಸ್ವತಹ ದೇವೇಗೌಡರು ಸೇರಿದಂತೆ ಪಕ್ಷದಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಮಾಜಿ ಪ್ರಧಾನಿ ದೇವೆಗೌಡರು ಇದರ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಮುಂದೆ ನೋಡಬೇಕಿದೆ..
Comments