ಮುಂದಿನ ಪ್ರಧಾನಿಯ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ..!!

28 Feb 2019 12:48 PM |
5526 Report

ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ… ಅಭ್ಯರ್ಥಿಯ ಆಯ್ಕೆಗಳು ಕೂಡ ಜೋರಾಗಿಯೇ ನಡೆಯುತ್ತಿವೆ… ಕನ್ನಡಿಗರು ಮತ್ತೆ ಜೆಡಿಎಸ್ ಮತ್ತು ಕಾಂಗ್ರೆಸ್ ಗೆ ಬೆಂಬಲವನ್ನು ಸೂಚಿಸಿದರೆ ಮತ್ತೊಮ್ಮೆ ಕನ್ನಡದ ವ್ಯಕ್ತಿಯೇ ಪ್ರಧಾನಿಯಾಗುವುದಕ್ಕೆ ಸಾಧ್ಯವಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಂದೆ  ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟಕ್ಕೆ ಬೆಂಬಲ ನೀಡಿ ಮತ್ತೆ 20-22 ಕ್ಷೇತ್ರಗಳನ್ನು ಗೆಲ್ಲುವಂತೆ ನಮಗೆ ಆಶೀರ್ವದಿಸಿದರೆ ಕನ್ನಡಿಗರೇ ಮತ್ತೊಮ್ಮೆ ಪ್ರಧಾನಿಯಾಗುವುದಕ್ಕೆ ಸಾಧ್ಯವಿದೆ ಎಂದು ತಿಳಿಸಿದ್ದಾರೆ.. ಹಿಂದೊಮ್ಮೆ ಕನ್ನಡಿಗರಾದ ಎಚ್ ಡಿ ದೇವೇಗೌಡರು ಪ್ರಧಾನಿಯಾಗಿದ್ದರು. ಇದೀಗ ಮತ್ತೊಮ್ಮೆ ಕನ್ನಡಿಗರು ಪ್ರಧಾನಿಯಾಗುವುದಕ್ಕೆ ಸಾಧ್ಯ' ಎಂದು ಕುಮಾರಸ್ವಾಮಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಯಾರು ಅಖಾಡದಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By

hdk fans

Reported By

hdk fans

Comments