ಹಾಸನ ಬಿಟ್ಟು ಹೆಚ್.ಡಿ ದೇವೇಗೌಡ್ರು ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು ಗೊತ್ತಾ..!

ಲೋಕಸಭಾ ಚುನಾವಣೆಯ ದಿನಾಂಕ ನಿಗಧಿಯಾದ ಮೇಲೆ ಪಕ್ಷದವರೆಲ್ಲಾ ತರಾತುರಿಯಲ್ಲಿಯೇ ಸಿದ್ದತೆಯನ್ನು ನಡೆಸುತ್ತಿದ್ದಾರೆ.. ಪಕ್ಷದವರೆಲ್ಲಾ ಕೂತು ಯಾರಿಗೆ ಯಾವ ಪಕ್ಷ ಸೂಕ್ತ ಎಂಬುದನ್ನು ತಿಳಿದುಕೊಂಡು ಅಖಾಡಕ್ಕೆ ಇಳಿಸಲು ಸಜ್ಜಾಗುತ್ತಿದ್ದಾರೆ.. ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಾಜ್ಯದಲ್ಲಿ ರಂಗೇರುತ್ತಿದೆ. ಈ ನಡುವೆ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ ದೇವೇಗೌಡ್ರು ತಮ್ಮ ರಾಜಕೀಯ ಜೀವನದ ಕೊನೆ ಚುನಾವಣೆಯನ್ನು ಸ್ಪರ್ಧೆ ಮಾಡುವ ಬಗ್ಗೆ ಎಲ್ಲರ ಗಮನವನ್ನು ಸೆಳೆಯುತ್ತಿದೆ.
ಸಹಜವಾಗಿ ಕೊನೆ ಚುನಾವಣೆಯನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ… ರಾಜಕೀಯ ವಯದಲ್ಲಿ ದೇವೇಗೌಡ್ರು ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ...ಇಂದು ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ್ರು ಸ್ಪರ್ಧೆ ಮಾಡುವುದಕ್ಕೆ ಮನಸ್ಸು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಭೆಯ ನಂತರ ಮಾತನಾಡಿದ ಹೆಚ್.ಡಿ ದೇವೇಗೌಡ್ರು ತುಮಕೂರು, ಮೈಸೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಯುವ ಬಗ್ಗೆ ಮಾತು ಕೇಳಿ ಬರುತ್ತಿದ್ದು, ಈ ಬಗ್ಗೆ ಅಂತಿಮ ನಿರ್ದಾರದ ತೆಗೆದುಕೊಳ್ಳಲಾಗುವುದು ತಿಳಿಸಿದ್ದಾರೆ.. ಒಟ್ಟಾರೆ ದೇವೆಗೌಡರು ಕೂಡ ಈ ಬಾರಿ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದ್ದು, ಇದು ದೇವೆಗೌಡರ ರಾಜಕೀಯದ ಕೊನೆ ಚುನಾವಣೆ ಎಂದು ಹೇಳಲಾಗುತ್ತಿದೆ.
Comments