ಮಂಡ್ಯದಲ್ಲಿ ನಿಖಿಲ್ ಗೆಲ್ಲಿಸಲು ಕುಮಾರಸ್ವಾಮಿಯವರ ಬಿಗ್ ಮಾಸ್ಟರ್ ಪ್ಲಾನ್..! ಏನ್ ಗೊತ್ತಾ..?
ಈಗಾಗಲೇ ಮಂಡ್ಯ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ಫಿಕ್ಸ್ ಆಗಿದ್ದಾರೆ.. ದೋಸ್ತಿ ಸರ್ಕಾರದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕೆ ಇಳಿಸಿದ್ದಾರೆ.. ಇನ್ನೂ ಸುಮಲತಾ ಅಂಬರೀಶ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.. ಪುತ್ರನನ್ನು ಗೆಲ್ಲಿಸಲೇ ಬೇಕು ಎಂದು ಪಣ ತೊಟ್ಟಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ನಗರದಲ್ಲಿ ಬೀಡು ಬಿಟ್ಟಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ನಗರದಲ್ಲೇ ಇದ್ದು ಜೆಡಿಎಸ್ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಚುನಾವಣೆಯಲ್ಲಿ ಗೆಲುವಿಗೆ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ರಾಜಕೀಯವಾಗಿ ಇಡೀ ರಾಜ್ಯದಲ್ಲೇ ಭಾರೀ ಕುತೂಹಲ ಕೆರಳಿಸಿದೆ. ಕೇಂದ್ರದ ಮಾಜಿ ಸಚಿವ ಅಂಬರೀಶ್ ಅವರ ಪತ್ನಿ, ನಟಿ ಸುಮಲತಾ ಅವರ ಸ್ಪರ್ಧೆಯಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ತಾರಾ ಮೆರಗು ಕಂಡುಬಂದಿದೆ. ದಿನದಿಂದ ದಿನಕ್ಕೆ ಚುನಾವಣೆಯ ಕಾವು ಹೆಚ್ಚುತ್ತಿದೆ. ಹೀಗಾಗಿ ಕುಮಾರಸ್ವಾಮಿ ತಮ್ಮ ಪುತ್ರನ ಗೆಲುವಿಗೆ ಜಿಲ್ಲೆಯ ರಾಜಕೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ. ಒಟ್ಟಾರೆಯಾಗಿ ಈ ಬಾರಿ ಮಗನನ್ನು ಗೆಲ್ಲಿಸಲೇ ಬೇಕು ಎಂಬುದು ಕುಮಾರಸ್ವಾಮಿಯವರ ಧ್ಯೇಯವಾಗಿದೆ. ಅದಕ್ಕಾಗಿ ದೋಸ್ತಿಗಳೊಡನೆ ಸಮಾಲೋಚನೆ ನಡೆಸುತ್ತಿದ್ದಾರೆ.
Comments