ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಿಜೆಪಿ ಮಹಿಳಾ ಸಮಾವೇಶ
ಮಾಜಿ ಸಚಿವೆ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿ ಕಿರಣ ಮಹೇಶ್ವರಿ ಮಾತನಾಡಿ ಮಹಿಳೆಯರಿಗಾಗಿಯೇ ಕೇಂದ್ರದಿಂದ ದೊರೆಯುವ ಸವಲತ್ತುಗಳನ್ನು ವಿವರಿಸಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರ ಕೈ ಬಲಪಡಿಸಲು ದೇಶದ ತುಂಬಾ ಕಮಲ ಅರಳಿಸಬೇಕಾಗಿದೆ, ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ರೂಪದಲ್ಲಿ ಕಮಲವನ್ನು ಕಳುಹಿಸಿರಿ ಎಂದು ಇಂದು ಬೆಳಿಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶದಲ್ಲಿ ಮತದಾರರನ್ನು ಕೇಳಿಕೊಂಡರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ, ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಪ್ರಭಾರಿಗಳಾದ ಸಚ್ಚಿದಾನಂದಮೂರ್ತಿ, ಉಪಾಧ್ಯಕ್ಷೆಯರಾದ ಶೃತಿ, ಮತ್ತು ಸವಿತ ಅಶೋಕ್, ಸೊಷಿಯಲ್ ಮೀಡಿಯಾ ಇನ್ಚಾರ್ಜ್ ಸರೋಜಿನಿ, ಬೇಲೂರು ರಾಘವೇಂದ್ರ ಶೆಟ್ಟಿ, ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್, ಸ್ಲಂ ಮೋರ್ಚ ಉಪಾಧ್ಯಕ್ಷ ಮುನಿಸ್ವಾಮಿ, ಸಮಾವೇಶಕ್ಕೆ ಆಗಮಿಸಿದ್ದರು.
ರಾಜಘಟ್ಟದ ಕಾಂಗ್ರೆಸ್ ಪಕ್ಷದಲ್ಲಿದ್ದ ಮಹಿಳಾ ಕಾರ್ಯಕರ್ತೆಯರನ್ನು ಇಂದು ಅಧಿಕೃತವಾಗಿ ಬಿಜೆಪಿಗೆ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಗೊಳಿಸಲಾಯಿತು. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶೃತಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಬಚ್ಚೇಗೌಡ ಮತ್ತಿತರರು ಮಾತನಾಡಿದರು. ಪ್ರಾಸ್ತಾವಿಕ ಭಾಷಣವನ್ನು ಬೆಂ.ಗ್ರಾ.ಜಿಲ್ಲಾ ಅಧ್ಯಕ್ಷೆ ಎಂ.ಕೆ.ವತ್ಸಲ ಮಾಡಿದರೆ, ಉಮಾಮಹೇಶ್ವರಿ ಸ್ವಾಗತ ಕೋರಿದರು, ವೈದ್ಯಕೀಯ ಪ್ರಕೋಷ್ಠದ ಡಾ.ಪದ್ಮಾ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಬೆಂ.ಗ್ರಾ.ಜಿಲ್ಲೆಯ ಎಲ್ಲಾ ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.
ಮಹಿಳಾ ಸಮಾವೇಶಕ್ಕೆ ಎಲ್ಲಾ ಮಂಡಲದ ಪದಾಧಿಕಾರಿಗಳು, ಚುನಾಯಿತ ಮಹಿಳಾ ಜನಪ್ರತಿನಿಧಿಗಳು, ವಿಶೇಷ ಮಹಿಳಾ ಆಹ್ವಾನಿತರು ಹಾಗೂ ನಗರ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾದ ಅಧ್ಯಕ್ಷರು, ಕಾರ್ಯದರ್ಶಿಗಳು, ಬೂತ್ ಮಟ್ಟದ ಎಲ್ಲಾ ಸದಸ್ಯರು, ಬಿಜೆಪಿ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Comments