ಕೈ ಹಿಡಿದ ತೆನೆಹೊತ್ತ ಮಹಿಳೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಇಂದು ಕಾರ್ಯಕರ್ತರ ಸಭೆ ನೆಡೆಸಿದ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿ ರಾಷ್ಟ್ರಿಯ ಅದ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆದೇಶದಂತೆ ನಮ್ಮ ತಾಲೂಕಿನ ಜೆ.ಡಿ.ಎಸ್ ಪಕ್ಷದ ಎಲ್ಲಾ ಮುಖಂಡರುಗಳಲ್ಲಿ ಮನವಿ ಮಾಡಿ ನಿಷ್ಠಾವಂತ ಕಾರ್ಯಕರ್ತರ ಸಂಪೂರ್ಣ ಬೆಂಬಲ ಜೆ ಡಿ ಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಡಾ. ಎಂ ವೀರಪ್ಪ ಮೊಯ್ಲಿ ರವರಿಗೆ.ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಸಭೆಯಲ್ಲಿ ನಗರ ಅಧ್ಯಕ್ಷ ರವಿಕುಮಾರ್, ತಾಲ್ಲೂಕು ಅಧ್ಯಕ್ಷ ಕೆಂಪರಾಜು, ಕಾರ್ಯಾಧ್ಯಕ್ಷ ಪಿ.ಸಿ.ಲಕ್ಷ್ಮೀನಾರಾಯಣ್, ನಗರ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ಮತ್ತಿತರ ಪದಾಧಿಕಾರಿಗಳು ಹಾಜರಿದ್ದರು.
Comments