ಏಪ್ರಿಲ್ 29 ರಂದು : ಘಾಟಿಯಲ್ಲಿ ಸಾಮೂಹಿಕ ವಿವಾಹ ನೋಂದಣಿಗೆ ಆಹ್ವಾನ
ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಏಪ್ರಿಲ್ 29 ರಂದು ಸಪ್ತಪದಿ ಯೋಜನೆಯಡಿ ಸರಳ ಸಾಮೂಹಿಕ ವಿವಾಹಗಳನ್ನು ನಡೆಸಲು ಉದ್ದೇಶಿಸಿದ್ದು, ಅರ್ಹ ವಧೂವರರು ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಸರಳÀ ಸಾಮೂಹಿಕ ವಿವಾಹಗಳನ್ನು ನಿರಂತರವಾಗಿ ನಡೆಸಲು ಉದ್ದೇಶಿಸಲಾಗಿದೆ. ಅದರಂತೆ ಏಪ್ರಿಲ್ 29 ರಂದು ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರಳ ಸಾಮೂಹಿಕ ವಿವಾಹಗಳನ್ನು ನಡೆಸಲಾಗುವುದು.ವಧು ವರರು ನೋಂದಾಯಿಸಿಕೊಳ್ಳಲು ಏಪ್ರಿಲ್ 5 ಕೊನೆಯ ದಿನವಾಗಿದೆ. ವಿವಾಹವಾಗುವ ವರನಿಗೆ 5 ಸಾವಿರ ರೂ, ವಧುವಿಗೆ 10 ಸಾವಿರ ರೂ ಹಾಗೂ ವಧುವಿಗೆ 40 ಸಾವಿರ ಮೌಲ್ಯದ ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು ಸೇರಿ ವಧು ವರರಿಗೆ 55 ಸಾವಿರ ಪ್ರೋತ್ಸಾಹ ಧನವನ್ನು ದೇವಾಲಯದ ವತಿಯಿಂದ ಭರಿಸಲಾಗುವುದು.
ವಧುವಿಗೆ ಕಂದಾಯ ಇಲಾಖೆಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು.
ವಧು ವರರು ಹಾಗೂ ಪೋಷಕರು ಕಡ್ಡಾಯವಾಗಿ ವಿವಾಹದ ಷರತ್ತುಗಳನ್ನು ಪಾಲಿಸುವ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ. ಹೆಚ್ಚಿನ ವಿವರಗಳಿಗಾಗಿ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
Comments